ಶಾರ್ಟ್ ಸರ್ಕ್ಯೂಟ್, ಬ್ಯಾಂಕ್ ಆಫ್ ಬರೋಡಾದಲ್ಲಿ ಬೆಂಕಿ…! ಮೈಸೂರು,ಜನವರಿ,03,2021(..) :ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಂಕ್ ಆಫ್ ಬರೋಡಾ ದಲ್ಲಿ ಬೆಂಕಿ ಅವಘಡ ಸಂಭವಿಸಿದೆ.ನಗರದ ಗಾಂಧಿ ವೃತ್ತದ ಬಳಿ ಇರುವ ಬ್ಯಾಂಕ್ ಆಫ್ ಬರೋಡದಲ್ಲಿ ಈ ಘಟನೆ ನಡೆದಿದೆ. ಸುಮಾರು 1:30ರ ಸಮಯಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಂದರ್ಭ ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಭಾನುವಾರವಾದ್ದರಿಂದ ಬ್ಯಾಂಕ್ ರಜೆಯಿಂದಾಗಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಲಷ್ಕರ್ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. : -- - …!