‘’ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೋಟಿಸ್’’ : ಅರುಣ್ ಸಿಂಗ್ ಸೂಚನೆ…! ಬೆಂಗಳೂರು,ಜನವರಿ,03,2021(..): ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚಿಸಿದ್ದಾರೆ. ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತು ಅರುಣ್ ಸಿಂಗ್ ಪ್ರತಿಕ್ರಿಯಿಸಿ ಯತ್ನಾಳ್ ಗೆ ನೋಟಿಸಿ ನೀಡಿ, ಕರೆದು ಮಾತನಾಡಿ ಎಂದು ಹೇಳಿದ್ದಾರೆ. ಇದಕ್ಕೆ ಕಮಿಟಿ ಸದಸ್ಯರು ಈಗಾಗಲೇ ಹಲವು ಬಾರಿ ಮಾತುಕತೆಯಾಗಿದೆ. ಹೀಗಾಗಿಯೂ, ಅವರು ಬಹಿರಂಗ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿಲ್ಲ ಎಂದು ಹೇಳಿದ್ದಾರೆ. : - -- - …!