ಖಾಲಿ ಇರದ ಹುದ್ದೆ ಬಗ್ಗೆ ಚರ್ಚೆ ಮಾಡಬಾರದು -ಸಚಿವ ಜಗದೀಶ್ ಶೆಟ್ಟರ್… ಹುಬ್ಬಳ್ಳಿ,ಜನವರಿ,2,2020(..): ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಮಾಡಬಾರದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಅವಧಿ ಮುಗಿಯುವವರೆಗೂ ಬಿ.ಎಸ್.‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಎರಡುವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ. ಖಾಲಿ ಇರದ ಹುದ್ದೆ ಬಗ್ಗೆ ಚರ್ಚೆ ಮಾಡಬಾರದು. ವಿಪಕ್ಷಗಳಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂಗೆ ಬಿಟ್ಟಿದ್ದು ಈ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು. ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ ತಿಂಗಳು ಪಕ್ಷದ ಕಾರ್ಯಕಾರಿಣಿ ನಡೆಯುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 60ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತರಾಗಿದ್ದಾರೆ ಎಂದರು. : - - - - -