ಸಿಎಂ ಬಿಎಸ್ ಯಡಿಯೂರಪ್ಪರಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ… ಬೆಂಗಳೂರು,ಜನವರಿ,2,2021(..):ಇಂದು ಸಂಜೆ ಬಹುನಿರೀಕ್ಷಿತ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಶಿವಮೊಗ್ಗದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆ ಅರುಣ್ ಸಿಂಗ್ ಅವರ ಜತೆ ಶಿವಮೊಗ್ಗಕ್ಕೆ ತೆರಳುತ್ತೇನೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರ ಜತೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ಇನ್ನು ಇತ್ತ ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಉಸ್ತುವಾರಿಯವರ ಜೊತೆ ಚರ್ಚೆ ನಡೆಸಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಆಕಾಂಕ್ಷಿಗಳು ಒತ್ತಡ ಹಾಕಿದ್ದಾರೆ. ಹೀಗಾಗಿ ಅರುಣ್ ಸಿಂಗ್ ಹಾಗೂ ಸಿಎಂ ಬಿಎಸ್ ವೈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. : - --- - - - , . 02, 2021 (..): . - , . .. . - . “ ,” .: - / .. / / .