‘ಹ್ಯಾಪಿ ನ್ಯೂ ಇಯರ್’ ಎಂದು ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿ: ಇಬ್ಬರು ಸಾವು…. ಉಡುಪಿ,ಜನವರಿ,1,2021(..):ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಶರಣ್(32), ಸಿದ್ದು(28) ಮೃತಪಟ್ಟವರು. ಇಬ್ಬರು ಯುವಕರು ರಸ್ತೆಯ ಮೇಲೆ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿದೆ. ಈ ವೇಳೆ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶರಣ್ ಮತ್ತು ಸಿದ್ದು ಜೆಸಿಬಿ ಟಿಪ್ಪರ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಘಟನೆ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - –- -