ಕುರುಬರ ಎಸ್ಟಿ ಮೀಸಲಾತಿ ಹೋರಾಟ ಕುರಿತು ಚಿಂತನಾ ಸಭೆ : ಸಚಿವ ಕೆ.ಎಸ್ ಈಶ್ವರಪ್ಪ ಭಾಗಿ ದಾವಣಗೆರೆ,ಡಿಸೆಂಬರ್,31,2020(..):ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದ ಮುಖಂಡರು ಮಠಾಧೀಶರು ಹೋರಾಟಕ್ಕೆ ಮುಂದಾಗಿದ್ದು ಈ ಹಿನ್ನೆಲೆ ಇಂದು ಚಿಂತನಾ ಸಭೆ ನಡೆಸಿದರು. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾಮಠದಲ್ಲಿ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮಿಜಿಗಳ ನೇತೃತ್ವದಲ್ಲಿ ಚಿಂತನ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಸಚಿವ ಕೆಎಸ್ ಈಶ್ವರಪ್ಪ, ಎಸ್ಟಿ ಹೋರಾಟ ಸಮಿತಿ ಅಧ್ಯಕ್ಷ ವಿರುಪಾಕ್ಷಪ್ಪ ಭಾಗಿಯಾಗಿದ್ದಾರೆ. ಜನವರಿ 6 ದಾವಣಗೆರೆ ಸಮಾವೇಶ ಹಾಗೂ ಜನವರಿ 15 ರ ಪಾದಯಾತ್ರೆ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದ್ದು, ಚಿಂತನಾ ಸಭೆಯಲ್ಲಿ ವಿವಿಧ ಮಠಗಳ ಸ್ವಾಮಿಜಿಗಳು ಭಾಗಿಯಾಗಿದ್ದಾರೆ. : - – ’- - –-- -