ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12ರಿಂದಲೇ 144 ಸೆಕ್ಷನ್ ಜಾರಿ… ಬೆಂಗಳೂರು,ಡಿಸೆಂಬರ್,31,2020(..):ಕೊರೋನಾ ರೂಪಾಂತರ ಹಿನ್ನೆಲೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಬ್ರೇಕ್ ಹಾಕಲಾಗಿದ್ದು ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೌದು ಇಂದು ಮಧ್ಯಾಹ್ನ 12 ಗಂಟೆಯಿಂದಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸಂಜೆ 6ರ ಬದಲು ಮಧ್ಯಾಹ್ನ 12ರಿಂದ ನಿಷೇಧಾಜ್ಞೆ ಬೆಂಗಳೂರಿನಲ್ಲಿ ಜಾರಿಯಾಗಲಿದೆ. ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿಯಾಗಲಿದ್ದು, ರಾತ್ರಿ 10 ಗಂಟೆಯ ನಂತರ ಬೆಂಗಳೂರಿನ ಎಲ್ಲಾ ಫ್ಲೈ ಓವರ್ ಗಳು ಬಂದ್ ಆಗಲಿವೆ. ಸಂಜೆಯಿಂದ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು ಬೆಂಗಳೂರಿನಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. …. . 144 12 , . 31, 2020 (..): . 144 , . - 10.00 . , .. , . .: / . 144 / . : 144 – – - -12 –- –