ನಾಳೆಯಿಂದ ಶಾಲಾ-ಕಾಲೇಜು ಆರಂಭ ಹಿನ್ನೆಲೆ: ಕಾಲೇಜಿಗೆ ಭೇಟಿ ನೀಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರಿಶೀಲನೆ… ಬೆಂಗಳೂರು,ಡಿಸೆಂಬರ್,31,2020(..):ರಾಜ್ಯದಲ್ಲಿ ನಾಳೆ(ಜನವರಿ 1)ಯಿಂದ ಶಾಲಾಕಾಲೇಜು, ವಿದ್ಯಾಗಮ ಆರಂಭವಾಗಲಿದ್ದು 8 ತಿಂಗಳ ಬಳಿಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿಗೆ ಭೇಟಿ ನೀಡಿದರು. ಈ ವೇಳೆ ಶಾಲಾರಂಭದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ನಾಳೆಯಿಂದ ಶಾಲಾಕಾಲೇಜುಗಳು ಆರಂಭವಾಗಲಿದ್ದು, ಮೊದಲನೇ ಹಂತದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗಿದೆ. ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯಗೊಳಿಸಲಾಗಿದೆ. : - – - - - - -.