ಮೈಸೂರು ವಿವಿಯ ಪದವಿ ವಿದ್ಯಾರ್ಥಿಗಳ ಪ್ರವೇಶಾತಿ: ಶುಲ್ಕ ಪಾವತಿಗೆ 15 ದಿನ ವಿಸ್ತರಣೆ ಮೈಸೂರು, ಡಿ.30, 2020 : (.. ) : ಪದವಿ ತರಗತಿಗಳಿಗೆ ಪ್ರವೇಶ ಪಡೆಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪ್ರವೇಶಾತಿಗೆ 15 ದಿನಗಳ ಕಾಲಾವಕಾಶ ವಿಸ್ತರಿಸಿದೆ ಮೈಸೂರು ವಿಶ್ವವಿದ್ಯಾನಿಲಯ. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಪದವಿ ತರಗತಿಗಳ ಆರಂಭ ವಿಳಂಬಗೊಂಡಿದ್ದು, ಸರಕಾರ ತರಗತಿ ಆರಂಭಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಪ್ರಕ್ರಿಯೆ ಆರಂಭಿಸಲಾಗಿದೆ. ಅದರಂತೆ ಪದವಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಕಾಶ ನೀಡಲಾಗಿತ್ತು. ಆದರೆ ಕರೋನಾ ಕಾರಣದಿಂದ ಕೆಲವೆಡೆ ವಿದ್ಯಾರ್ಥಿಗಳ ಪ್ರವೇಶಾತಿ ನಿರೀಕ್ಷಿತಮಟ್ಟದಲ್ಲಿ ಆಗಿಲ್ಲ. ಜತೆಗೆ ವಿದ್ಯಾರ್ಥಿಗಳು ಸಹ ಶುಲ್ಕ ಪಾವತಿಗೆ ಸಮಯಾವಕಾಶ ನೀಡುವಂತೆ ವಿಶ್ವವಿದ್ಯಾನಿಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಮಾನವೀಯ ನೆಲೆಗಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ದಿನಾಂಕ ವಿಸ್ತರಿಸಲು ಸಮ್ಮತಿಸಲಾಯಿತು. ಅದರಂತೆ ಇಂದಿನಿಂದ 15 ದಿನಗಳ ಕಾಲ ಪ್ರವೇಶಾತಿ ದಿನ ವಿಸ್ತರಿಸಲಾಗಿದೆ. ಇದು ಪದವಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. …. : 15 , . 30, 2020 (..): . 15 . . . , -, . -19 . . , . . , .: / / : ---------