ಕೊರೋನಾ ರೂಪಾಂತರ ಭೀತಿ: ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ… ಬೆಂಗಳೂರು,ಡಿಸೆಂಬರ್,30,2020(..):ರಾಜ್ಯದಲ್ಲಿ ಬ್ರಿಟನ್ ಹೊಸ ಕೊರೋನಾ ರೂಪಾಂತರ ಪತ್ತೆಯಾಗಿದ್ದು ಮತ್ತೆ ಕೋವಿಡ್-19 ಆತಂಕ ಶುರುವಾಗಿದೆ. ಈ ಮಧ್ಯೆ ಜನವರಿ 1ರಿಂದ ಶಾಲಾ-ಕಾಲೇಜು ಆರಂಭಕ್ಕೆ ಅವಕಾಶ ನೀಡಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನ ಬದಲಿಸುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಿಗದಿಯಂತೆ ಶಾಲಾ-ಕಾಲೇಜು ಆರಂಭವಾಗಲಿವೆ.ರೂಪಾಂತರ ಕೊರೋನಾದಿಂದ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಜನವರಿ 1 ರಿಂದ ಶಾಲಾ-ಕಾಲೇಜು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ಶಾಲೆಗೆ ಮಕ್ಕಳನ್ನ ಕಳುಹಿಸಲು ಒತ್ತಾಯವಿಲ್ಲ. ಒಂದು ತರಗತಿಗೆ 15 ವಿದ್ಯಾರ್ಥಿಗಳು ಇರುತ್ತಾರೆ. ಆರೋಗ್ಯ ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳು ಇರುತ್ತವೆ. ಹಾಗೆಯೇ ಶಿಕ್ಷಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ತಿಳಿಸಿದರು. …. : , . 30, 2020 (..): . , 10th 2nd 1 , . , . 15 , .: 1/ / : – - - – –