ಜ.7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರಕ್ಕೆ ನಿರ್ಬಂಧ…. ನವದೆಹಲಿ,ಡಿಸೆಂಬರ್,30,2020(..): ದೇಶದಲ್ಲಿ ಬ್ರಿಟನ್ ರೂಪಾಂತರ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನವರಿ 7ರವರೆಗೆ ಬ್ರಿಟನ್ ನಿಂದ ಭಾರತಕ್ಕೆ ವಿಮಾನ ಸಂಚಾರವನ್ನ ನಿರ್ಬಂಧಿಸಲಾಗಿದೆ. ತಾತ್ಕಾಲಿಕವಾಗಿ ಯಕೆಗೆ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ 7, 2021ರವರೆಗೆ ನಿಷೇಧ ಮಾಡಿ, ಕೇಂದ್ರ ವಿಮಾನಯಾನ ಸಚಿವಾಲಯ ಆದೇಶಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯಾ, ಯುನೈಟೆಡ್ ಕಿಂಗ್ಡಮ್ ನಿಂದ 2021ರ ಜನವರಿ 7ರವರೆಗೆ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. : – - –-