ಸಿಎಂ ಗೆ ಅಹವಾಲು ಸಲ್ಲಿಸಲು ಈ ಒಂದು ಇ-ಮೇಲ್ ಐಡಿ ಮಾತ್ರ ಬಳಸಿ…! ಬೆಂಗಳೂರು,ಡಿಸೆಂಬರ್,28,2020(..) :ಮುಖ್ಯಮಂತ್ರಿಗಳಿಗೆ ಏನಾದರೂ ಅಹವಾಲು ಸಲ್ಲಿಸಬೇಕು ಎಂದಾದರೆ ಜನವರಿ 1ರಿಂದ ಇದು ಚಾಲ್ತಿಗೆ ಬರುವ ಇ-ಮೇಲ್ ಐಡಿಗೆ ಕಳುಹಿಸಿ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.ಜನವರಿ ಒಂದರಿಂದ ಅಹವಾಲು ಸ್ವೀಕಾರಕ್ಕೆ .@. ಇ-ಮೇಲ್ ಐಡಿಯನ್ನು ಮಾತ್ರ ಬಳಕೆಯಲ್ಲಿ ಇರಲಿದೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು .@. ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. : -------- …!