ಶಾಲಾ ಕಾಲೇಜು ಆರಂಭ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ – ಸಿಎಂ ಬಿಎಸ್ ವೈ ಸ್ಪಷ್ಟನೆ ಬೆಂಗಳೂರು,ಡಿಸೆಂಬರ್,28,2020(..):ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು ಎಂದು ಸ್ಪಷ್ಟ ಪಡಿಸಿದ್ದಾರೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. …. – , . 28, 2020 (..): .. 1 . . , “ 2nd 1 . .”: 1/ / .. : - – - – -