ಆಸ್ತಿ ತೆರಿಗೆ ಹೆಚ್ಚಳ, ಹೊಸ ವರ್ಷಕ್ಕೆ ಜನರಿಗೆ ಬಿಗ್ ಶಾಕ್…! ಬೆಂಗಳೂರು,ಡಿಸೆಂಬರ್,28,2020(..): ರಾಜ್ಯ ಸರ್ಕಾರದಿಂದ ಹೊಸ ವರ್ಷದಂದೇ, ಜನರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.ಆಸ್ತಿ ತೆರಿಗೆಯಲ್ಲಿ ಶೇ.15ರಿಂದ ಶೇ.30ರಷ್ಟು ಹೆಚ್ಚಳ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ಮೂಲಕ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಪಾಲಿಕೆ, ನಗರ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡುವಂತ ಮಸೂದೆಗೆ ಅಂಗೀಕಾರ ನೀಡಲಾಗಿದೆ. ಈ ಮೂಲಕ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಿದೆ. ವಾಣಿಜ್ಯ ಕಟ್ಟಡದ ತೆರಿಗೆ ಹೆಚ್ಚಳಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. …. – !, . 28, 2020 (..): . 15% 30% , , . .. . .: / / : ---- - …!