ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠ ವಿವಾದಕ್ಕೆ ಮುಕ್ತಿ : ಸಂಸದೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು,ಡಿಸೆಂಬರ್,27,2020(..): ನಮ್ಮ ಸರ್ಕಾರದ ಅವಧಿಯಲ್ಲಿಯೇ ದತ್ತ ಪೀಠದ ವಿವಾದಕ್ಕೆ ಮುಕ್ತಿ ಸಿಗಲಿದೆ. ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣ ವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯಲಿರುವ ದತ್ತಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿವೆ. ಈ ಬಗ್ಗೆ ನಮ್ಮ ಕಾನೂನು ತಜ್ಞರು ಪರಿಶೀಲನೆ ಮಾಡುತ್ತಿದ್ದಾರೆ. ರಾಮಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣವಾಗಲಿದೆ ಎಂದು ಹೇಳಿದರು. ಜಗತ್ತಿನಲ್ಲಿ ದತ್ತಭಕ್ತರಿದ್ದಾರೆ, ದತ್ತಪಾದುಕೆ ಇರುವುದು ಚಿಕ್ಕಮಗಳೂರಿನಲ್ಲಿ. ದತ್ತಪೀಠ ನಮ್ಮದಾಗಬೇಕು ಎಂಬುದು ಸಂಕಲ್ಪವಾಗಿದೆ. ಮುಂದಿನ ದಿನದಲ್ಲಿ ದತ್ತಪೀಠ ನಮ್ಮದಾಗುವ ವಿಶ್ವಾಸವಿದೆ ಎಂದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ಯಾಮಲ ಕುಂದೂರು, ಚಿತ್ರನಟಿ ತಾರ ಮುಂತಾದವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. : ------