ಓಮ್ನಿ ಕಾರಿಗೆ ಲಾರಿ ಡಿಕ್ಕಿ : ಮೂವರು ಮಹಿಳೆಯರು ಸಾವು… ಆಂಧ್ರಪ್ರದೇಶ,ಡಿಸೆಂಬರ್,26,2020(..):ಓಮ್ನಿ ಕಾರಿಗೆ ಲಾರಿ ಡಿಕ್ಕಿಯಾಗಿ ಕರ್ನಾಟಕದ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯ ಬಳಿ ನಡೆದಿದೆ. ತಿರುಪತಿಯ ಚಂದ್ರಗಿರಿ ಮಂಡಲದ ನೆಂಡ್ರಗುಂಟ ಬಳಿ ಈ ದುರ್ಘಟನೆ ನಡೆದಿದೆ. ಮೃತ ಇಬ್ಬರು ಮಹಿಳೆಯರು ಕರ್ನಾಟಕ ಮೂಲದವರು ಎನ್ನಲಾಗಿದೆ. ಮತ್ತೋರ್ವ ಮಹಿಳೆ ಬಂಗಾರುಪಾಲೆಂನ ರಾಣಿ ಎಂದು ಗುರುತಿಸಲಾಗಿದೆ. ಮೃತ ಮೂವರು ಮಹಿಳೆಯರು ತಿರುಮಲದ ವೆಂಕಟೇಶ್ವರನ ದರ್ಶನ ಪಡೆದು ಹಿಂತಿರುಗುತ್ತಿದ್ದ ವೇಳೆ ಇವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - – - – -