ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ನಟಿ ರಾಗಿಣಿ… ಬೆಂಗಳೂರು,ಡಿಸೆಂಬರ್,24,2020(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಆರೋಗ್ಯ ಸಮಸ್ಯೆಯಿಂದಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗಿದೆ. ಉಸಿರಾಟದ ಸಮಸ್ಯೆ ಮತ್ತು ಹೊಟ್ಟೆನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ನಟಿ ರಾಗಿಣಿ ಅವರನ್ನ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ನಟಿ ರಾಗಿಣಿ ಸುಪ್ರೀಂಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. : - – -