ನೈಟ್ ಕರ್ಫ್ಯೂ: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ…. ಬೆಂಗಳೂರು,ಡಿಸೆಂಬರ್,23,2020(..): ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನ ಬದಲಾಗಿ ನಾಳೆಯಿಂದ ಜಾರಿ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ನಾಳೆಯಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕ್ರೈಸ್ತ ಬಾಂಧವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ. ಇನ್ನು ನೈಟ್ ಕರ್ಫ್ಯೂ ವೇಳೆ ಬಸ್, ವಿಮಾನ, ಸಂಚಾರಕ್ಕೆ ಸರ್ಕಾರ ಅವಕಾಶ ನೀಡಿದೆ. ಅಲ್ಲದೆ ಎಲ್ಲಾ ರೀತಿಯ ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಿದೆ. : - - – .