ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ…. ಬೆಂಗಳೂರು,ಡಿಸೆಂಬರ್,23,2020(..):ಕೋವಿಡ್-19 ಹೊಸ ರೂಪಾಂತರ ಪತ್ತೆಯಾದ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲಿದ್ದು, ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಬ್ರಿಟನ್ ನಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. …. , . 23, 2020 (..): .. . , , “ 10 6 , 2, 2021. .”: / .. / : - - – – -