ನಡು ರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ತಲ್ವಾರ್ ನಿಂದ ಅಟ್ಯಾಕ್… ಹುಬ್ಬಳ್ಳಿ ,ಡಿಸೆಂಬರ್,21,2020(..):ನಡುರಸ್ತೆಯಲ್ಲೇ ಯುವತಿ ಮೇಲೆ ಪಾಗಲ್ ಪ್ರೇಮಿಯೊಬ್ಬ ತಲವಾರಿನಿಂದ ಹಲ್ಲೆ ಮಾಡಿದ್ದು ಈ ಘಟನೆಯಿಂದ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಈ ಘಟನೆ ಹಾಡಹಗಲೇ ನಡೆದಿದೆ. ದೇಶಪಾಂಡೆ ನಗರದ ನಡು ರಸ್ತೆಯಲ್ಲೇ ಪಾಗಲ್ ಪ್ರೇಮಿ ಯುವತಿ ಮೇಲೆ ತಲವಾರಿನಿಂದ ಮನಬಂದಂತೆ ದಾಳಿ ನಡೆಸಿದ್ದಾನೆ. ಯುವತಿಯ ತಲೆಗೆ ತಲ್ವಾರ್ ನಿಂದ ಹಲ್ಲೆ ಮಾಡಿದ್ದು ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದಾಳಿ ನಡೆಸಿದ ಪಾಗಲ್ ಪ್ರೇಮಿಯನ್ನು ಕುಂದಗೋಳ ತಾಲೂಕಿನ ರಾಮನು ಗ್ರಾಮದವನಾಗಿದ್ದು, ದಾಳಿಗೊಳಗಾದ ಯುವತಿ ಧಾರವಾಡ ಜಿಲ್ಲೆಯ ಮೊರಬ ಗ್ರಾಮದವರು ಎಂದು ಗುರುತಿಸಲಾಗಿದೆ. ಸದ್ಯ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : – - –-