ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿ ಬಂಧನ…! ಬೆಂಗಳೂರು,ಡಿಸೆಂಬರ್,20,2020(..): ಸಿಸಿಬಿ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿರುವವರ ಮೇಲೆ ಬಲೆ ಬೀಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೋಲಿಸರು ದಾಳಿ ಮಾಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಶಶಿಕುಮಾರ್ ನನ್ನು ಬಂದಿಸಿದ್ದಾರೆ. ಬಂಧಿತ ನಿಂದ 2.5 ಲಕ್ಷ ನಗದು ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. : ---…!