ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ : ಸಿದ್ದರಾಮಯ್ಯ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು ಮೈಸೂರು,ಡಿಸೆಂಬರ್,19,2020(..): ಜೆಡಿಎಸ್‌ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿದ್ದಾರೆ. ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿದ ಬಳಿಕ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಒಳಒಪ್ಪಂದಗಳ ಜನಕ ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ. …. 10 : , . 19, 2020 (..): “ , , .. , . 10 ,” .. . ’ , .. , “ . . - , .“ . . . ,” ., . . “ . ’ . ,” . : .. / / / :---10 ---- --..