ದೇಶದಲ್ಲಿ ಒಂದು ಕೋಟಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ… ನವದೆಹಲಿ,ಡಿಸೆಂಬರ್,19,2020(..):ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದು ಕೋಟಿ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 25,153 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10,004,599ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ, ಈ ಮೂಲಕ ಭಾರತ 1 ಕೋಟಿ ಕೊರೊನಾವೈರಸ್ ಪ್ರಕರಣಗಳನ್ನು ದಾಟಿದ ಎರಡನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದ್ದು, ‘ಸಮಗ್ರ ಸರ್ಕಾರ’ ವಿಧಾನದ ಮೂಲಕ, ಹೆಚ್ಚಿನ ಚೇತರಿಕೆಯ ದರ ಮತ್ತು ಕಡಿಮೆ ಸಾವಿನ ದರಗಳನ್ನು ನಿರಂತರವಾಗಿ ಕೇಂದ್ರೀಕರಿಸಿವೆ ಎಂದು ಹೇಳಿದೆ. ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 347 ಮಂದಿ ಕೊರೋನಾವೈರಸ್‌ನಿಂದ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 1,45,136ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ ಒಟ್ಟು ಬಿಡುಗಡೆಯಾದವರ ಸಂಖ್ಯೆ 95,50,712ಕ್ಕೆ ಏರಿಕೆಯಾಗಿದೆ. ಜತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,08,751ಕ್ಕೆ ತಗ್ಗಿದೆ. … ! , . 19, 2020 (..): . 24 25,153 10,004,599 . . , .347 24 . 1,45,136. 95,50,712, 3,08,751.: / / : – - - - – .