ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು ಪ್ರಕಟ ಬೆಂಗಳೂರು,ಸೆಪ್ಟಂಬರ್, 23,2024 (..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಸುದೀರ್ಘ ವಾದ ಮಂಡನೆಯಾಗಿ ನ್ಯಾ. ನಾಗಪ್ರಸನ್ನ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇದೀಗ ನಾಳೆ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟವಾಗಲಿದೆ. : , , , ,