ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್… ಬಳ್ಳಾರಿ ,ಡಿಸೆಂಬರ್,18,2020(..):ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡುವ ಮೂಲಕ ಹರಕೆ ತೀರಿಸಿದ್ದಾರೆ. ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಾರೆ ಎನ್ನಲಾಗಿದೆ. : - - – – -