ಗ್ರಾ.ಪಂ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ- ಡಿ.ಕೆ ಶಿವಕುಮಾರ್.. ಬೆಂಗಳೂರು,ಡಿಸೆಂಬರ್,17,2020(..): ಗ್ರಾಮಪಂಚಾಯತ್ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮತ್ತು ತಮ್ಮನ್ನ ಭೇಟಿ ಮಾಡಿದ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನ ಬೆಂಬಲಿಸಲಿದ್ದಾರೆ. ಈ ವಿಚಾರವಾಗಿ ನನ್ನನ್ನ ಭೇಟಿಯಾಗಿ ಚರ್ಚೆ ನಡೆಸಿದರು ಎಂದು ಹೇಳಿದರು. ಹೊಸಕೋಟೆ ಉಪಚುನಾವಣೆ ಬಿಜೆಪಿಯಿಂದ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿದ ಹಿನ್ನೆಲೆ ಶರತ್ ಬಚ್ಚೇಗೌಡ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. : - – - – - .