ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ, ಸಿಎಂ ಯಡಿಯೂರಪ್ಪ ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿ : ವಾಟಾಳ್ ನಾಗರಾಜ್ ವಾಗ್ದಾಳಿ ಬೆಂಗಳೂರು,ಡಿಸೆಂಬರ್,17,2020(..) :ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಿದ್ದೆ ಅಕ್ರಮವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಅಕ್ರಮ ಬೇರೆ ಯಾರೂ ಮಾಡಿಲ್ಲ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಪರಿಷತ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ವಿಧಾನಪರಿಷತ್ ನಲ್ಲಿ ರೌಡಿಗಳು ಸದಸ್ಯರಾಗಿದ್ದಾರೆ. ಮರ್ಯಾದೆ ಇದ್ದರೇ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಪರಿಷತ್ ನಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಸಭಾಪತಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಕೆಲವರು ಪರಿಷತ್ ನಲ್ಲಿ ನಾಯಿಗಳಿಗಿಂತಲೂ ಕಡೆಯಾಗಿ ನಡೆದುಕೊಂಡಿದ್ದಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ. : --- ----