ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ… ಬೆಂಗಳೂರು, ಡಿಸೆಂಬರ್ 17,2020(..):ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ, ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಅವರು, ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿರುವುದಾಗಿ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. …. .. , . 17, 2020 (..): , .. . .. ’ . : / / .. / : - - – -