ಮಾಜಿ ಸಚಿವ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ…. ಧಾರವಾಡ,ಡಿಸೆಂಬರ್,14,2020(..): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನ ಧಾರವಾಡ ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನ ಸಿಬಿಐ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿತ್ತು. ನಂತರ ಕೋರ್ಟ್ ವಿನಯ್ ಕುಲಕರ್ಣಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಸದ್ಯ ಹಿಂಡಿಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಜಾಮೀನುಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಧಾರವಾಡದ ಸಿಬಿಐ ವಿಶೇಷ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ. : - - - -