ಮೈಸೂರು ಜಿಲ್ಲೆ: ಸಂಚಾರ ಆರಂಭಿಸಿದ್ದ ಬಸ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು… ಮೈಸೂರು,ಡಿಸೆಂಬರ್,14,2020(..):ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಯುತ್ತಿದ್ದು, ಈ ಮಧ್ಯೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಸೀಗೂರು ಬಳಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಆಗಿದೆ. ಈ ಮಧ್ಯೆ ಬೆಂಗಳೂರು ಮತ್ತು ಮೈಸೂರು ಸೇರಿ ಹಲವು ಕಡೆಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆ ಮೈಸೂರಿನ ಪಿರಿಯಾಪಟ್ಟಣದಿಂದ ಬೆಟ್ಟದಪುರಕ್ಕೆ ಸಂಚಾರ ಆರಂಭಿಸಿದ್ದ ಬಸ್ ಮೇಲೆ ಸೀಗೂರು ಬಳಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಸ್ ನಲ್ಲಿ 26 ಮಂದಿ ಪ್ರಯಾಣಿಕರು ಮತ್ತು 6 ಸಿಬ್ಬಂದಿಗಳು ಇದ್ದರು. ಪೊಲೀಸ್ ಭದ್ರತೆಯಲ್ಲಿ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಬಸ್ ನ ಹಿಂಭಾಗದ ಗಾಜು ಪುಡಿಪುಡಿಯಾಗಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –