ಕೋಡಿ “ಹುಳಿ” ಬಳಸಿಕೊಂಡು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ : ಸಿ.ಟಿ.ರವಿ ಟೀಕೆ ಬೆಂಗಳೂರು,ಡಿಸೆಂಬರ್,14,2020(..): ಕೆಲವರು ಕೋಡಿ “ಹುಳಿ” ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.ಸಾರಿಗೆ ನೌಕರರ ಮುಷ್ಕರಕ್ಕೆ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮುಂದಾಳತ್ವದ ಕುರಿತು ಅವರು ಕಿಡಿಕಾರಿದ್ದು, ಕೆಲವರು ಕೋಡಿ “ಹುಳಿ” ಅನ್ನು ಬಳಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಆ ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. : -------..