ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಸುಪ್ರೀಂ ಮೊರೆ ಹೋದ ಸರ್ಕಾರ… ಬೆಂಗಳೂರು,ಡಿಸೆಂಬರ್,12,2020(..):ಬಿಬಿಎಂಪಿ ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರ ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಆರು ವಾರಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಕಳೆದ ವಾರದ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಇದೀಗ ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೊರೆ ಹೋಗಿದೆ. ಕ್ಷೇತ್ರಗಳ ಮರುವಿಂಗಡಣಾ ಕಾರಣವನ್ನ ನೀಡಿರುವ ಸರ್ಕಾರ ವಿಶೇಷ ಕಾಯ್ದೆ ರೂಪಿಸುವ ಬಗ್ಗೆ ಅರ್ಜಿಯಲ್ಲಿ ಉಲ್ಲೇಖ ಮಾಡಿದೆ. : – – -