ಮೈಸೂರಿನಲ್ಲಿ ಬಸ್ ಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ… ಮೈಸೂರು.ಡಿಸೆಂಬರ್,12,2020(..):ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ಸಹ ಮುಂದುವರೆದಿದೆ. ಈ ಮಧ್ಯೆ ಮೈಸೂರಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಮೈಸೂರು ನಗರದ ಮೇಟಗಳ್ಳಿ ಬಳಿ ದುಷ್ಕರ್ಮಿಗಳು ತಡರಾತ್ರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಜಯಪುರ ಬಳಿ ಎರಡು ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಗಾಜು ಪುಡಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಬಳ್ಳಾರಿಯಲ್ಲೂ ದುಷ್ಕರ್ಮಿಗಳು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೂರು ಬಸ್ ಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. : - - - –-