ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಆರ್ಥಿಕ ಹೊಡೆತ: ರೈತರಿಗೆ ಜಾಗೃತಿ ಮೂಡಿಸುತ್ತೇವೆ-ಡಿ.ಕೆ ಶಿವಕುಮಾರ್…. ಬೆಂಗಳೂರು,ಡಿಸೆಂಬರ್,11,2020(..):ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಗೋಹತ್ಯೆ ನಿಷೇಧ ಕಾಯ್ದಯಿಂದ ಆರ್ಥಿಕ ಹೊಡೆತ ಬೀಳಲಿದೆ. ಹೀಗಾಗಿ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನೆಲೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಆರ್ಥಿಕ ತೊಂದರೆ ಉಂಟಾಗಲಿದೆ. ಚರ್ಮೋದ್ಯಮದ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಈ ಬಗ್ಗೆ ರಾಜ್ಯಾದ್ಯಂತ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ಪ್ರತಿ ತಾಲ್ಲೂಕಿನಲ್ಲೂ ಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು. ಗೋ ಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರವಾಗಬೇಕಿದೆ. ಸರ್ಕಾರ ಜಾರಿ ಮಾಡಲು ಹೊರಟಿರುವ ಈ ಕಾಯ್ದೆಗೆ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. : - - - – - .