ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಗೆ ಅವಕಾಶ : ಭಾರತೀಯ ವೈದ್ಯಕೀಯ ಸಂಘ ಮೈಸೂರು ಶಾಖೆಯಿಂದ ಪ್ರತಿಭಟನೆ ಮೈಸೂರು,ಡಿಸೆಂಬರ್,11,2020(..): ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರ ಹಲವು ಶಸ್ತ್ರ ಚಿಕಿತ್ಸೆ ಮಾಡಲು ಅವಕಾಶ ನೀಡಿದ‌ ಹಿನ್ನಲೆ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಬಂದ್ ಗೆ ಭಾರತೀಯ ವೈದ್ಯಕೀಯ ಸಂಘ ಮೈಸೂರು ಶಾಖೆ ಸದಸ್ಯರು ನೈತಿಕ ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು.ದೇಶದಾದ್ಯಂತ. ಭಾರತೀಯ ವೈದ್ಯಕೀಯ ಸಂಘದಿಂದ ಭಾರತ್ ಬಂದ್ ಕರೆ ಹಿನ್ನೆಲೆ ವೈದ್ಯರು‌ ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾದರು. ಮಿಕ್ಸೋಪತಿ ಮಾಡಿದರೆ ಸಾಕಷ್ಟು ತೊಂದರೆ ಆಗುತ್ತೆ‌. ಕೂಡಲೆ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಲಕ್ಷಾಂತರ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ದಿನಗಳಲ್ಲಿ ಹೋರಟ ತೀವ್ರಗೊಳಿಸುವುದಾಗಿ ಪ್ರತಿಭಟನಕಾರರು ಎಚ್ಚರಿಕೆ ನೀಡಿದರು. : ------ --