ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು : ಸಿಇಟಿ ಪ್ರಶ್ನೆ ಪತ್ರಿಕೆ ಲೋಪ, ಪರಿಶೀಲನೆಗೆ ತಜ್ಞರ ಸಮಿತಿ ರಚಿಸಿದ ಸರಕಾರ.! ಬೆಂಗಳೂರು, ಏಪ್ರಿಲ್ 22, 2024 : (.. ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು () ಕರ್ನಾಟಕ ಪರೀಕ್ಷಾ ಪ್ರಾಧಿಕಾರ () ನಡೆಸಿದ ಪರೀಕ್ಷೆಯಲ್ಲಿನ ಲೋಪದೋಷಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಲು ರಾಜ್ಯ ಸರಕಾರ ತಜ್ಞರ ಸಮಿತಿ ರಚಿಸಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ. 18 ಮತ್ತು 19 ರಂದು ನಡೆಸಿತ್ತು. ಸಿಇಟಿ ಪರೀಕ್ಷೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ನಡೆಸಲಾಯಿತು. ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪ ಕಂಡು ಬಂದಿದ್ದು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳ ತಪ್ಪಿಗೆ ಶಿಕ್ಷೆ ಅನುಭವಿಸುವ ಭಯ ಮಕ್ಕಳನ್ನು ಕಾಡುತ್ತಿದೆ. ಪತ್ರಿಕೆಗಳ ಹಲವಾರು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿತ್ತು. ಅನೇಕ ಪ್ರಶ್ನೆಗಳು ಪಠ್ಯಕ್ರಮದ ಹೊರತಾಗಿರುವ ಕಾರಣ ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಆದುದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯಿಸಲಾಗಿತ್ತು. ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ ಏ. 27 ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತ್ರುತ ವರದಿ ಸಲ್ಲಿಸುವಂತೆ ‘ಕೆಇಎ’ ಗೆ ಸೂಚಿಸಲಾಗಿದೆ. ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸಿದೆ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಲಾಗಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : , , , , 2024 : () () 18th 19th 2024. 4 (, , ). 3 . , . . – . 27th . . , 4 . . . , . .