ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ: ವಿಪಕ್ಷಗಳಿಂದ ತೀವ್ರ ವಿರೋಧ… ಬೆಂಗಳೂರು,ಡಿಸೆಂಬರ್,9,2020(..):ವಿಪಕ್ಷ ಸದಸ್ಯರ ವಿರೋಧದ ನಡುವೆ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಇಂದು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆ ಮಾಡಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆ ಇಂದು ವಿಧಾನಸಭೆ ಕಲಾಪದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಗೋಹತ್ಯೆ ನಿಷೇಧ ವಿಧೇಯಕ ಮಂಡಿಸಿದ್ದಾರೆ. ಇನ್ನು ಈ ಮಸೂದೆ ಮಂಡನೆಗೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಗದ್ದಲ ಉಂಟಾದ ಹಿನ್ನೆಲೆ ಸ್ಪೀಕರ್ ವಿಧಾನಸಭೆ ಕಲಾಪವನ್ನ ಕೆಲಕಾಲ ಮುಂದೂಡಿದರು. : - –- - –--