ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನ ಹೊಡೆದುರುಳಿಸಿದ ಭದ್ರತಾ ಪಡೆಗಳು… ಜಮ್ಮುಕಾಶ್ಮೀರ,ಡಿಸೆಂಬರ್,9,2020(..):ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕೆನ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನ ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ. ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಇಬ್ಬರು ಉಗ್ರರನ್ನ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎನ್ನಲಾಗಿದೆ. ಇನ್ನು ಸ್ಥಳದಲ್ಲಿದ್ದ ಕೆಲವೊಂದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಇನ್ನೂ ಹಲವು ಉಗ್ರರು ಅಡಗಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. : - - - -.