ಕಾಂಗ್ರೆಸ್ ಚಿಹ್ನೆಗೆ ವ್ಯಾಲ್ಯೂ ಇಲ್ಲ: ಹೀಗಾಗಿ ಹಸಿರು ಶಾಲು ಹಾಕಿಕೊಂಡು ಬಂದಿದ್ದಾರೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್… ಕೋಲಾರ,ಡಿಸೆಂಬರ್,9,2020(..):ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ರೈತರು ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿದ್ದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವ್ಯಾಲ್ಯೂ ಇಲ್ಲ. ಹೀಗಾಗಿ ಕಾಂಗ್ರೆಸ್ ಶಾಲು ಬಿಟ್ಟು ಹಸಿರು ಶಾಲು ಹಾಕಿಕೊಂಡು ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಕೋಲಾರದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರೈತರಿಗೆ ಜೆಡಿಎಸ್ ಯಾವುದೇ ದ್ರೋಹ ಮಾಡುವುದಿಲ್ಲ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೆ. ಆಗ ಯಾವ ರೈತ ಮುಖಂಡರು ಅನುಕೂಲವಾಗಿದೆ ಎಂದು ಹೇಳಲಿಲ್ಲ. ಭೂ ಸುಧಾರಣಾ ಕಾಯ್ದೆಯಲ್ಲಿ ಕೆಲ ಮಾರಕ ಅಂಶಗಳನ್ನ ತೆಗೆಯಲಾಗಿದೆ. ಭೂಸುಧಾರಣಾ ಕಾಯ್ದೆ ಬಗ್ಗೆ ರೈತಮುಖಂಡರು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದರು. : – - - – - -