ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ,ಡಿಸೆಂಬರ್,07,2020 :ಈ ಬಾರಿಯ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧ ಮಸೂದೆ ಮಂಡನೆ ಮಾಡುತ್ತಿಲ್ಲ. ಆದ್ರೇ ಗೋ ಹತ್ಯೆ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಸಾಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧವನ್ನ ಅಂಗೀಕರಿಸುವಂತೆ ಸದನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು. ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ. ಆದರೆ, ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. : – - - – -