ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು… ಮೈಸೂರು,ಡಿಸೆಂಬರ್,7,2020(..):ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರಾಜು(19) ಮೃತಪಟ್ಟ ಬೈಕ್ ಸವಾರ. ಹಿಂಬದಿ ಕುಳಿತಿದ್ಧ ಸವಾರ ತರುಣ್ ಗೆ ಗಾಯಗಳಾಗಿದ್ಧು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - - -