ಶಾಸಕ ಜಿ.ಟಿ ದೇವೇಗೌಡರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ದಂಪತಿ ಭೇಟಿ, ಮಾತುಕತೆ… ಮೈಸೂರು,ಡಿಸೆಂಬರ್,4,2020(..):ಕಳೆದ ಕೆಲ ದಿನಗಳ ಹಿಂದೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದಂಪತಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರ ನಿವಾಸಕ್ಕೆ ಭೇಟಿನೀಡಿದ್ದು, ಇದು ತೀವ್ರ ಕುತೂಹಲ ಕೆರಳಿಸಿದೆ. ಶಾಸಕ ಜಿ.ಟಿ ದೇವಗೌಡರ ನಿವಾಸಕ್ಕೆ ಕೆಲ ದಿನಗಳ ಹಿಂದೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ ದಂಪತಿ ಬೋಜನ ಸವಿದರು. ನಂತರ ಕೆಲಕಾಲ ಜಿಟಿ ದೇವೇಗೌಡರ ಜೊತೆ ನಿಖಿಲ್ ಕುಮಾರಸ್ವಾಮಿ ಮಾತುಕತೆ ನಡೆಸಿದರು ಎನ್ನಲಾಗಿದೆ. ಜಿ.ಟಿ ದೇವೇಗೌಡರು ಜೆಡಿಎಸ್ ನ ಶಾಸಕರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಬಿಜೆಪಿ ನಾಯಕರ ಜತೆ ಗುರುತಿಸಿಕೊಳ್ಳುತ್ತಿದ್ದ ಜಿಟಿ ದೇವೇಗೌಡರ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಮೃದುಧೋರಣೆ ತೋರಿದ ಬೆನ್ನಲ್ಲೆ ನಿಖಿಲ್ ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. : - –-- ’ -