ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂಕೋರ್ಟ್ ನವದೆಹಲಿ,ಡಿಸೆಂಬರ್,4,2020(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಜಾಮೀನು ಅರ್ಜಿಯನ್ನ ಸುಪ್ರೀಂಕೊರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ನಟಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತುಕೊಂಡ ಸುಪ್ರೀಂಕೋರ್ಟ್ ಸಿಸಿಬಿ ಮತ್ತು ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿ ಅರ್ಜಿ ವಿಚಾರಣೆಯನ್ನ ಜನವರಿ ಮೊದಲವಾರಕ್ಕೆ ಮುಂದೂಡಿದೆ. ಹೀಗಾಗಿ ನಟಿ ರಾಗಿಣಿಗೆ ಈ ವರ್ಷ ಬಿಡುಗಡೆ ಭಾಗ್ಯವಿಲ್ಲದಂತಾಗಿದ್ದು, ಜೈಲಿನಲ್ಲಿಯೇ ಹೊಸ ವರ್ಷ ಆಚರಣೆ ಮಾಡುವಂತೆ ಆಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನವಾಗಿ, ಜೈಲು ಸೇರಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗಾಗಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಗೆ ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. … ’ , . 4, 2020 (..): ’ . . .: / / / : -’- - –-