ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಸ್ಟಾಫ್ ನರ್ಸ್ ಸ್ಥಳದಲ್ಲೇ ಸಾವು…. ರಾಯಚೂರು,ಡಿಸೆಂಬರ್,4,2020(..):ನಿಂತಿದ್ಧ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ಸ್ಟಾಫ್ ನರ್ಸ್ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸ್ಟಾಪ್​ ನರ್ಸ್​ ಸಂಗಮೇಶ್​ (30) ಮೃತಪಟ್ಟವರು. ಚಾಲಕ ಹನುಮಪ್ಪನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದೆ. ಲಿಂಗಸುಗೂರು ತಾಲೂಕಿನ ಪಾಮನಕಲ್ಲೂರಿನಿಂದ ರಾಯಚೂರಿನ ರೀಮ್ಸ್​ ಆಸ್ಪತ್ರೆಗೆ ಗರ್ಭಿಣಿಯನ್ನು ಆಂಬ್ಯುಲೆನ್ಸ್ ನಲ್ಲಿ ಕರೆತರಬೇಕಿತ್ತು. ಆಂಬ್ಯುಲೆನ್ಸ್ ನಲ್ಲಿ ಸ್ಟಾಪ್​ ನರ್ಸ್​ ಸಂಗಮೇಶ್​ (30)ನೊಂದಿಗೆ ಚಾಲಕ ಹನುಮಪ್ಪ ಹೊರಟಿದ್ದು, ಈ ವೇಳೆ ಅಂಬ್ಯಲೆನ್ಸ್ ಲಿಂಗಸಗೂರಿನ ಸರ್ಜಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗುರುವಾರ ರಾತ್ರಿ 11 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಸಂಗಮೇಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭತ್ತ ತುಂಬಿದ ಲಾರಿಯನ್ನು ಇಂಡಿಕೇಟರ್​ ಹಾಕದೆಯೇ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಅವಸರದಲ್ಲಿ ಹೊರಟಿದ್ದ ಅಂಬ್ಯುಲೆನ್ಸ್ ಲಾರಿ ಕಾಣಿಸದ ಹಿನ್ನೆಲೆಯಲ್ಲಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. : - – - – - .