ಭೂಮಿ ಕಂಪಿಸಿದ ಅನುಭವ: ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನರು…. ವಿಜಯಪುರ,ಡಿಸೆಂಬರ್,3,2020(..):ವಿಜಯಪುರ ಜಿಲ್ಲೆಯ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮನಗೊಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಗ್ರಾಮಗಳಲ್ಲಿನ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಗಳ ಮೇಲ್ಚಾವಣಿ ಮಣ್ಣು ಉದುರಿದೆ ಎಂದು ಹೇಳಲಾಗುತ್ತಿದೆ. ಇನ್ನು ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಗ್ರಾಮದಲ್ಲಿನ ಜನರು ಆತಂಕಗೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. : ---