ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ. ಧಾರವಾಡ, ಏಪ್ರಿಲ್​ ,22,2024 (..):ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರವನ್ನ ವಾಪಸ್ ಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ. ದಿಂಗಾಲೇಶ್ವ ಸ್ವಾಮೀಜಿ ಅವರು, ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ’ ಎಂದಿದ್ದರು. ಈ ಮೂಲಕ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಸಮರ ಸಾರಿದ್ದರು. ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ. : , ,