ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ: ಓರ್ವ ಶಂಕಿತ ಅರೆಸ್ಟ್… ಮಂಗಳೂರು,ಡಿಸೆಂಬರ್,3,2020(..):ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಕೆಲ ದಿನಗಳ ಹಿಂದೆ ಗೋಡೆಗಳ ಮೇಲೆ ಉಗ್ರರ ಪರ ಬರಹಗಳನ್ನು ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಶಂಕಿತನನ್ನ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. : -- - –- - .