ಭಕ್ತ ಕನಕದಾಸರ 533 ನೇ ಜಯಂತೋತ್ಸವ: ಕುರುಬ ಸಂಪ್ರದಾಯದಂತೆ ಕಂಬಳಿ ಹೊದಿಸಿ ಸಿಎಂ ಬಿಎಸ್ ವೈಗೆ ಸನ್ಮಾನ ಬೆಂಗಳೂರು,ಡಿಸೆಂಬರ್,3,2020(..):ಸಂತ, ಕವಿ, ದಾರ್ಶನಿಕ, ದಾಸಶ್ರೇಷ್ಟ, ಭಕ್ತ ಕನಕದಾಸರ 533 ನೇ ಜಯಂತೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಕನಕಶ್ರೀ, ಕನಕ ಗೌರವ, ಕನಕ ಯುವ ಪುರಸ್ಕಾರ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎ.ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾಗಿನೆಲೆ ಕನಕ ಗುರುಪೀಠ ತಿಂಥಿಣಿ ಬ್ರಿಜ್ ಶಾಖಾಮಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕುರುಬ ಸಂಪ್ರದಾಯದಂತೆ ಕಂಬಳಿ ಹೊದಿಸಿ ಸನ್ಮಾನಿಸಲಾಯಿತು. : - - - - .