ಸಚಿವರಾಗಲು ಹೆಚ್.ವಿಶ್ವನಾಥ್ ಅನರ್ಹ ವಿಚಾರ: ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ… ಬೆಂಗಳೂರು,ನವೆಂಬರ್,30,2020(..):ರಾಜ್ಯ ಸಚಿವ ಸಂಪುಟ ಸೇರಲು ಕಾತರರಾಗಿದ್ದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗೆ ಹೈಕೋರ್ಟ್ ವಿಭಾಗೀಯ ಪೀಠ ಬಿಗ್ ಶಾಕ್ ನೀಡಿದ್ದು, ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಆದೇಶ ನೀಡಿದೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಹೈಕೋರ್ಟ್ ಆದೇಶದಿಂದ ನನಗೆ ನೋವಾಗಿದೆ. ಈ ಬಗ್ಗೆ ಹೆಚ್.ವಿಶ್ವನಾಥ್ ಅವರ ಜತೆ ಇನ್ನು ಮಾತನಾಡಿಲ್ಲ. ವಿಶ್ವನಾಥ್ ಅವರ ಜತೆ ಈ ಬಗ್ಗೆ ಚರ್ಚಿಸುತ್ತೇನೆ ಎಂದರು. ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ಕೇಂದ್ರಕ್ಕೆ ಆಕಾಂಕ್ಷಿಗಳ ಪಟ್ಟಿ ಕಳುಹಿಸಿದ್ದೇವೆ. ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಆದೇಶ ಬಿಗ್​ ಶಾಕ್​ ನೀಡಿದೆ. ಸಚಿವರಾಗುವ ಹಂಬಲದಲ್ಲಿದ್ದ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಇಂದು ನ್ಯಾಯಾಲಯ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 164 (1B), 361 ಅಡಿ ಎ.ಎಚ್​.ವಿಶ್ವನಾಥ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈ ಕೋರ್ಟ್​ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನುಳಿದಂತೆ ಆರ್​. ಶಂಕರ್​ ಮತ್ತು ಎಂಟಿಬಿ ನಾಗರಾಜ್​ರನ್ನು ಅರ್ಹರು ಎಂದು ಪರಿಗಣಿಸಲಾಗಿದೆ. ಇವರಿಬ್ಬರು ಸಂವಿಧಾನದಡಿಯಲ್ಲಿ ಮರು ಆಯ್ಕೆಯಾಗಿರುವುದರಿಂದಾಗಿ ಅನರ್ಹರಾಗಿಲ್ಲ ಎಂದು ತಿಳಿಸಲಾಗಿದೆ. : -. – – -- -.