ಕಂಪ್ಲಿ ತಾಲ್ಲೂಕು ನೂತನ ವಿಜಯನಗರ ಜಿಲ್ಲೆಗೆ ಸೇರಿಸುವಂತೆ ಒತ್ತಾಯ : ಕಂಪ್ಲಿ ಬಂದ್ .. ಕಂಪ್ಲಿ, ನವೆಂಬರ್,30,2020(..):ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲೂಕು ಸೇರಿಸದ ಹಿನ್ನೆಲೆ ಕಂಪ್ಲಿ ತಾಲ್ಲೂಕು ಹೋರಾಟ ಸಮಿತಿ ಇಂದು ಕಂಪ್ಲಿ ಬಂದ್ ಗೆ ಕರೆ ನೀಡಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಮಾಡಲಾಗಿದ್ದು, ಈ ನೂತನ ಜಿಲ್ಲೆಗೆ ಕಂಪ್ಲಿ ತಾಲೂಕನ್ನು ಸೇರಿಸಲಾಗುತ್ತೆ ಎನ್ನಲಾಗಿತ್ತು. ಆದರೆ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದ್ದು, ಕಂಪ್ಲಿಯನ್ನು ಬಳ್ಳಾರಿಗೆ ಸೇರಿಸಲಾಗಿದೆ. ಹೀಗಾಗಿ ಕಂಪ್ಲಿ ತಾಲ್ಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸದ ಹಿನ್ನೆಲೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿರುವ ತಾಲ್ಲೂಕು ಹೋರಾಟ ಸಮಿತಿ ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸಬೇಕೆಂದು ಒತ್ತಾಯಿಸಿ ಕಂಪ್ಲಿ ಬಂದ್ ಕರೆ ನೀಡಿದ್ದು, ಪಟ್ಟಣದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲಾಗಿದೆ. : - – - - -.